ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆ : ಡಾ.ಕೆ. ಸುಧಾಕರ್ ಹೇಳಿದ್ದೇನು?

ಶನಿವಾರ, 4 ಸೆಪ್ಟಂಬರ್ 2021 (10:21 IST)
ಬೆಂಗಳೂರು : ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆ ಕುರಿತಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ಎಲ್ಲ ಅಂಶಗಳನ್ನು ಗಮನದಲ್ಲಿರಿಸಿ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗಣೇಶ ಹಬ್ಬ ಆಚರಣೆ ಭಾವನಾತ್ಮಕವಾದುದು. ಆದರೆ, ನೆರೆಯ ಕೇರಳದಲ್ಲಿ ಓಣಂ, ಮೊಹರಂನಿಂದ ಕೋವಿಡ್ ಹತೋಟಿ ತಪ್ಪಿದೆ. ಆ ರೀತಿ ರಾಜ್ಯದಲ್ಲಿ ಹಳಿ ತಪ್ಪಬಾರದು ಎಂಬುದು ಸರಕಾರದ ಉದ್ದೇಶ. ಅಂತಿಮವಾಗಿ ಸರಕಾರ ಎಲ್ಲಅಂಶಗಳನ್ನು ಗಮನದಲ್ಲಿರಿಸಿ ತೀರ್ಮಾನ ಕೈಗೊಳ್ಳಲಿದೆ.
ಗಣೇಶೋತ್ಸವ ಆಚರಣೆಗೆ ಅವಕಾಶ ನೀಡುವಂತೆ ಇಡೀ ರಾಜ್ಯಾದ್ಯಂತ ಭಾರೀ ಕೂಗು ಕೇಳಿಬರುತ್ತಿದೆ. ಸರಕಾರವನ್ನು ಜನರು ಮನವಿ ಮಾಡುತ್ತಿದ್ದಾರೆ. ಈ ಬಗ್ಗೆ ಅಧಿಕೃತ ಮಾಹಿತಿ ಶೀಘ್ರದಲ್ಲೇ ಹೊರಬೀಳಲಿದೆ.
ರಾಜ್ಯದಲ್ಲಿ ಶಾಲೆಗಳು ಆರಂಭವಾಗಿದ್ದು, ಎಲ್ಲ ಕಡೆ ಮಕ್ಕಳ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ. ಪೋಷಕರಷ್ಟೇ ಜವಾಬ್ದಾರಿಯನ್ನು ಸರಕಾರ ಹೊತ್ತಿದೆ. ಗಡಿಭಾಗ, ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಲ್ಲಿಎಚ್ಚರ ವಹಿಸಲಾಗಿದೆ. ಬಸ್ ಹಾಗೂ ರೈಲು ನಿಲ್ದಾಣಗಳಲ್ಲಿ ಸಮರ್ಪಕ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ' ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ