5 ಮತ್ತು 8 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಶನಿವಾರ, 25 ಫೆಬ್ರವರಿ 2023 (08:12 IST)
ಬೆಂಗಳೂರು : ಈ ಬಾರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ನಿರ್ಧರಿಸಿದೆ.
 
ಅದರಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪಬ್ಲಿಕ್ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.

ಮಾರ್ಚ್ 13 ರಿಂದ 18ರ ವರೆಗೆ ಪರೀಕ್ಷೆ ನಡೆಯಲಿದೆ. ಮಾರ್ಚ್ 13ರಿಂದ 8ನೇ ತರಗತಿಗೆ ಹಾಗೂ ಮಾರ್ಚ್ 15 ರಿಂದ 5ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಪ್ರಾರಂಭವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ