ಕಾಶಿ ಯಾತ್ರೆಗೆ ಮಾರ್ಗಸೂಚಿ ಪ್ರಕಟ

ಮಂಗಳವಾರ, 28 ಜೂನ್ 2022 (07:04 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಯವರ ಕನಸಿನ ಯೋಜನೆ ಕಾಶಿ ಕಾರೀಡಾರ್ ಗೆ ರಾಜ್ಯದ ಜನರು ಭೇಟಿ ನೀಡುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ,

ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ʼಕಾಶಿ ಯಾತ್ರೆʼಗೆ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಸರ್ಕಾರದಿಂದ ಅಂತಿಮ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ.

ಇಂದು ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು, ಭವ್ಯ ಕಾಶಿ – ದಿವ್ಯ ಕಾಶಿಯ ಭವ್ಯತೆಯನ್ನ ಪ್ರಧಾನಿ ನರೇಂದ್ರ ಮೋದಿಯವರ ಮುತುವರ್ಜಿಯಿಂದ ಅಭಿವೃದ್ದಿಗೊಳಿಸಲಾಗಿದೆ.

ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂಪಾಯಿಗಳಂತೆ ಸಹಾಯಧನ ನೀಡುವ ಯೋಜನೆಗೆ ಮಾರ್ಗಸೂಚಿಗಳನ್ನು ಇಂದು ಅಂತಿಮಗೊಳಿಸಿದ್ದು, ಸರಕಾರದಿಂದ ಅಧಿಕೃತವಾಗಿ ಆದೇಶ ಹೊರಡಿಸಲಾಗಿದೆ.

ಏಪ್ರಿಲ್ 1, 2022 ಕ್ಕೆ ಪೂರ್ವಾನ್ವಯವಾಗುವಂತೆ ಈ ಆದೇಶವನ್ನು ಹೊರಡಿಸಲಾಗಿದ್ದು, ಸೂಕ್ತ ದಾಖಲಾತಿಗಳೊಂದಿಗೆ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಚಿವರು ಹೇಳಿದ್ದಾರೆ.

ಮಾರ್ಗಸೂಚಿಯ ಅಂಶಗಳು

1. ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಂಡ ಅರ್ಹ ಯಾತ್ರಾರ್ಥಿಗಳಿಗೆ ತಲಾ ರೂ 5,೦೦೦/-ಗಳನ್ನು ಸಹಾಯ ಧನವಾಗಿ ನೀಡಲಾಗುವುದು.
2. ಕರ್ನಾಟಕದ ಖಾಯಂ ನಿವಾಸಿಗಳು ಮಾತ್ರ ಈ ಧನ ಸಹಾಯ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಈ ಉದ್ದೇಶಕ್ಕಾಗಿ ಕೆಳಕಂಡ ಯಾವುದಾದರೂ ಒಂದು ದಾಖಲೆಗಳನ್ನು ಕಡ್ಡಾಯವಾಗಿ ಒದಗಿಸತಕ್ಕದ್ದು.
• ಕರ್ನಾಟಕ ರಾಜ್ಯ ಚುನಾವಣಾ ಆಯೋಗ ನೀಡಿರುವ “ಗುರುತಿನ ಚೀಟಿ’ ಅಥವಾ
• ಆಧಾರ್ ಗುರುತಿನ ಚೀಟಿ ಅಥವಾ
• ರೇಷನ್ ಕಾರ್ಡ್

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ