ಕರ್ನಾಟಕ ಬಜೆಟ್ ಬಗ್ಗೆ ರಾಹುಲ್ ಗಾಂಧಿ ನಿರೀಕ್ಷೆ ಇದುವೇ ಅಂತೆ!
ಇಂದು ಸಿಎಂ ಕುಮಾರಸ್ವಾಮಿ ವಿಧಾನಸಭೆಯಲ್ಲಿ ತಮ್ಮ ಸರ್ಕಾರದ ಮೊದಲ ಬಜೆಟ್ ಮಂಡಿಸಲಿದ್ದಾರೆ. ಈ ನಿಟ್ಟಿನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಕರ್ನಾಟಕ ಸರ್ಕಾರ ತನ್ನ ಭರವಸೆಗಳಿಗೆ ಬದ್ಧವಾಗಿರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
‘ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಬಜೆಟ್ ರೈತರ ಸಾಲಮನ್ನಾ ಮಾಡುವ ಮಾತು ಉಳಿಸಿಕೊಳ್ಳುತ್ತದೆ ಎಂದು ನಂಬಿದ್ದೇನೆ. ಈ ಮೂಲಕ ಕರ್ನಾಟಕ ಸರ್ಕಾರ ದೇಶದ ಎಲ್ಲಾ ರೈತರಿಗೆ ಭರವಸೆಯ ಆಶಾಕಿರಣವಾಗುತ್ತದೆ ಎಂದು ನಂಬಿದ್ದೇನೆ’ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.