ರಾಜ್ಯಾದ್ಯಂತ ಮುಂದಿನ ಮೂರ್ನಾಲ್ಕು ದಿನ ಮಳೆಯ ಮುನ್ಸೂಚನೆ

ಶನಿವಾರ, 9 ಸೆಪ್ಟಂಬರ್ 2023 (08:34 IST)
ಬೆಂಗಳೂರು : ಬರದ ಆತಂಕದ ನಡುವೆ ರಾಜ್ಯದಲ್ಲಿ ಮಳೆರಾಯ ತಂಪೆರೆಯುತ್ತಿದ್ದಾನೆ. ಮುಂದಿನ ಮೂರ್ನಾಲ್ಕು ದಿನ ರಾಜ್ಯಾದ್ಯಂತ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ.
 
ಸಿಲಿಕಾನ್ ಸಿಟಿ ಮಂದಿಯನ್ನು ಸಂಜೆ ಮಳೆ ಕಾಡಲಿದೆ. ಮಳೆ ಜೊತೆ ಶೀತಗಾಳಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ಸೂಚನೆ ಕೊಟ್ಟಿದೆ.  ಉತ್ತರ ಒಳನಾಡು, ಕರಾವಳಿಯಲ್ಲಿ ಭಾರೀ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ಮಳೆ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳು ಉತ್ತರ ಒಳನಾಡಿನ ಬೀದರ್, ರಾಯಚೂರು, ಕೊಪ್ಪಳ, ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

ಉತ್ತರ ಒಳನಾಡು ಕರಾವಳಿ ಭಾಗಗಳಿಗೆ ಗುಡುಗು ಮಿಂಚಿನ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡು ಭಾಗದಲ್ಲಿ ಗಾಳಿಯ ವೇಗ 40-50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂಬ ಮಾಹಿತಿಯನ್ನು ಇಲಾಖೆ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ