ಕರ್ನಾಟಕದಾದ್ಯಂತ ಮಳೆ ಕೊಂಚ ಬಿಡುವು ಪಡೆದಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲೂ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸುಬ್ರಹ್ಮಣ್ಯ, ಕೊಲ್ಲೂರು, ಕ್ಯಾಸಲ್ರಾಕ್, ಗೇರುಸೊಪ್ಪ, ಕಾರ್ಕಳ, ಬೆಳ್ತಂಗಡಿ, ಧರ್ಮಸ್ಥಳ, ಉಡುಪಿ, ಶೃಂಗೇರಿ, ತಾಳಗುಪ್ಪ, ಲಿಂಗನಮಕ್ಕಿ, ಉಪ್ಪಿನಂಗಡಿ, ಪುತ್ತೂರು, ಕುಂದಾಪುರ, ಕೋಟ, ಮಂಕಿ, ಶಿರಾಲಿ, ಸಿದ್ದಾಪುರ, ಲೋಂಡಾ, ಜಯಪುರ, ಭಾಗಮಂಡಲ, ಕದ್ರಾ, ಹೊನ್ನಾವರ, ಮಾಣಿ, ಪಣಂಬೂರು, ಕಮ್ಮರಡಿ, ಕಳಸ, ಸೋಮವಾರಪೇಟೆ, ಹುಂಚದಕಟ್ಟೆ, ಬಳ್ಳಾರಿಯಲ್ಲೂ ಮಳೆಯಾಗಿದೆ.
ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಲಿದೆ. ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.