ರಾಜ್ಯದದಲ್ಲಿ ಇಂದಿನಿಂದ ಮಳೆ ಸಾಧ್ಯತೆ !

ಭಾನುವಾರ, 12 ಜೂನ್ 2022 (14:47 IST)
ಬೆಂಗಳೂರು : ಮುಂಗಾರು ರಾಜ್ಯಕ್ಕೆ ಎಂಟ್ರಿ ಕೊಟ್ಟು 10 ದಿನ ಕಳೆದಿದೆ.

ಇಷ್ಟು ದಿನ ರಾಜ್ಯದಲ್ಲಿ ಚದುರಿದಂತೆ ಮಳೆ ಆಗುತ್ತಿತ್ತು. ಆದರೆ ಇಂದಿನಿಂದ ಮುಂಗಾರು ಮಳೆ ಅಬ್ಬರಿಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಯಾದಗಿರಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ಗದಗ, ಹಾವೇರಿ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಶಿವಮೊಗ್ಗದಲ್ಲಿ ಭಾರೀ ಮಳೆ ಆಗುವ ಮುನ್ಸೂಚನೆ ಇದ್ದು.

ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ 3 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ