ಇಂದು ಮತ್ತು ನಾಳೆಯೂ ಮಳೆ

ಶನಿವಾರ, 27 ನವೆಂಬರ್ 2021 (08:17 IST)
ತಮಿಳುನಾಡು ವರುಣನ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಮಳೆಯಿಂದ ಚೇತರಿಸಿಕೊಳ್ಳುತ್ತಿದ್ದ ಚೆನ್ನೈಗೆ  ಸೈಕ್ಲೋನ್ ಗಾಯದ ಮೇಲೆ ಬರೆ ಎಳೆಯುತ್ತಿದೆ.
ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವ 20 ಜಿಲ್ಲೆಗಳ ಶಾಲಾ – ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇತ್ತ ಕೇರಳ ಸಹ ಪ್ರವಾಸಿಗರು ಮತ್ತು  ಜನತೆಗೆ ಎಚ್ಚರಿಕೆಯಿಂದ ಇರಬೇಕೆಂದ ಸಂದೇಶ ರವಾನಿಸಿದೆ. ಸೈಕ್ಲೋನ್ ಪರಿಣಾಮ ಬೆಂಗಳೂರಿನಲ್ಲಿ ತುಂತುರು ಮಳೆಯಾಗುವ ಸಾಧ್ಯತೆಗಳಿವೆ.
ಗುರುವಾರ ಬೆಂಗಳೂರಿನ  ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಇಂದು ಮಳೆ ಬೀಳುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ, ಹಾಸನ. ದಾವಣಗೆರೆ, ಚಿಕ್ಕಬಳ್ಳಾಪುರ, ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ.
ಇನ್ನುಳಿದಂತೆ ಚಳಿ  ಸಹ ರಾಜ್ಯದಲ್ಲಿ ಆರಂಭವಾಗಲಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಚಳಿ ಮತ್ತು ಸುಳಿ ಗಾಳಿಯ ಜೊತೆ ಒಣ ಹವೆ ಇರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ