ರಾಜ್ಯದಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ!

ಬುಧವಾರ, 17 ನವೆಂಬರ್ 2021 (09:03 IST)
ಕಳೆದ ಒಂದು ವಾರದಿಂದ ರಾಜ್ಯದ ಪ್ರತಿಯೊಂದು ಜಿಲ್ಲೆಯನ್ನು ವರುಣ ದೇವ  ಪ್ರವೇಶಿಸುತ್ತಿದ್ದಾನೆ. ಕಳೆದ ವಾರ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿತ್ತು.
ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತ ಮತ್ತು ಬಂಗಾಳ ಕೊಲ್ಲಿಯ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಇಂದು ಮತ್ತು ನಾಳೆ ಸಹ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೀನುಗಾರರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಇತ್ತ ನಿರಂತರ ಮಳೆಯಿಂದಾಗಿ ರಾಜ್ಯದ ಜಲಾಶಯಗಳು ಭರ್ತಿಯಾಗುತ್ತಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕ ಸಂದೇಶ ನೀಡಲಾಗಿದೆ.
ಬೆಂಗಳೂರಿನಲ್ಲಿ ಗರಷ್ಠ 26 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ನಾಲ್ಕೈ ದು ದಿನ ಮೋಡ ಕವಿದ ವಾತಾವರಣದ ಜೊತೆಗೆ ಮಳೆಯಾಗಲಿದೆ. ಬೆಂಗಳೂರಿನ ರಸ್ತೆಗಳ ಗುಂಡಿಗಳಲ್ಲಿ ಮಳೆ ನೀರು ನಿಂತ ಪರಿಣಾಮ ವಾಹನ ಸವಾರರು ಭಯದಲ್ಲಿ ಸಂಚರಿಸುವ ಪರಿಸ್ಥಿತಿ ಎದುರಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ