ಲೋಕಸಭೆ ಚುನಾವಣೆಗೆ ನಟಿ ರಮ್ಯಾ ಈ ಕ್ಷೇತ್ರದಿಂದ ಸ್ಪರ್ಧೆ ಪಕ್ಕಾ?!
ಈ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹಿತ ರಾಜ್ಯ ನಾಯಕರು ಪಾಲ್ಗೊಂಡು ಲೋಕಸಭೆ ಚುನಾವಣೆ ತಯಾರಿ ಬಗ್ಗೆ ಚರ್ಚಿಸಲಿದ್ದಾರೆ.
ಕೆಲವೊಂದು ಮೂಲಗಳ ಪ್ರಕಾರ ಮೈಸೂರು ಮತ್ತು ಮಂಡ್ಯದಲ್ಲಿ ಸಿದ್ದರಾಮಯ್ಯ ಮತ್ತು ಅಂಬರೀಷ್ ಸ್ಪರ್ಧೆಗೆ ಪಕ್ಷ ಒಲವು ಹೊಂದಿದೆ. ಇನ್ನು, ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಿರುವ ನಟಿ ರಮ್ಯಾಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನೀಡಲು ಚಿಂತನೆ ನಡೆಸಲಾಗಿದೆಯಂತೆ. ಎಲ್ಲಾ ಅಂದುಕೊಂಡಂತೆ ನಡೆದರೆ ರಮ್ಯಾ ಈ ಬಾರಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸಂಸದ ಸ್ಥಾನಕ್ಕೆ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.