ವಿದ್ಯಾರ್ಥಿನಿಯ ಮೇಲೆ ಸಹಪಾಠಿಗಳಿಂದ ಅತ್ಯಾಚಾರ ; ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಪ್ರಿನ್ಸಿಪಾಲ್
ಬುಧವಾರ, 19 ಸೆಪ್ಟಂಬರ್ 2018 (07:10 IST)
ಡೆಹ್ರಾಡೂನ್ : ವಸತಿ ಶಾಲೆಯ 16 ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಆಕೆಯ ಸಹಪಾಠಿಗಳೇ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆಗಸ್ಟ್ 14 ರಂದು ಡೆಹ್ರಾಡೂನ್ ನ ವಸತಿ ಶಾಲೆಯೊಂದರ 16 ವರ್ಷದ ಬಾಲಕಿಯ ಮೇಲೆ ಆಕೆಯ ನಾಲ್ವರು ಸಹಪಾಠಿಗಳು ಅತ್ಯಾಚಾರ ಎಸಗಿದ್ದಾರೆ. ಈ ವಿಚಾರ ಅನಾರೋಗ್ಯಕ್ಕೆ ತುತ್ತಾದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದಾಗ ತಿಳಿದುಬಂದಿದೆ. ಹಾಗೇ ಬಾಲಕಿ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಆಗ ಶಾಲೆಯ ಆಡಳಿತ ಮಂಡಳಿ, ಪ್ರಿನ್ಸಿಪಾಲ್ ಹಾಗೂ ಆತನ ಪತ್ನಿ ವಿದ್ಯಾರ್ಥಿನಿಗೆ ಗರ್ಭಪಾತ ಔಷಧ ನೀಡಿ, ಅಬಾರ್ಷನ್ ಮಾಡಿಸುವ ಯತ್ನವನ್ನೂ ಮಾಡಿದ್ದಾರೆ.
ಈ ವಿಚಾರ ಬಾಲಕಿಯ ಪೋಷಕರಿಗೆ ತಿಳಿದು ಪೊಲೀಸರಿಗೆ ದೂರು ನೀಡಿದ್ದಾರೆ. ಪೋಕ್ಸೋ ಕಾಯ್ದೆಯಡಿ ಸಾಕ್ಷ್ಯ ನಾಶದ ಪ್ರಕರಣ ಕೂಡ ದಾಖಲಿಸಿಕೊಂಡ ಪೊಲೀಸರು ಶಾಲೆಯ ಪ್ರಿನ್ಸಿಪಾಲ್, ಆತನ ಪತ್ನಿ, ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಆರೋಪಿಗಳನ್ನು ಬಂಧಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.