ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯಲ್ಲಿ ಇಳಿಕೆ

ಸೋಮವಾರ, 24 ಜುಲೈ 2023 (12:03 IST)
ಬೆಂಗಳೂರು : ಕಳೆದ ವರ್ಷಕ್ಕೆ ಹೋಲಿಸಿದರೆ 2022-23ನೇ ಶೈಕ್ಷಣಿಕ ವರ್ಷದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯಲ್ಲಿ ಶೇ 67 ರಷ್ಟು ಇಳಿಕೆಯಾಗಿದೆ. 2022-23ನೇ ಸಾಲಿನಲ್ಲಿ ಕೇವಲ 5,945 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ.
 
ಇದು ಕಳೆದ ಐದು ವರ್ಷಗಳಲ್ಲಿ ಕಡಿಮೆ ಅಂಕಿಅಂಶವಾಗಿದೆ. ಆದರೆ 2021-22 ರಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ 18,461 ರಷ್ಟಿತ್ತು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಅಂಕಿಅಂಶಗಳಲ್ಲಿ ಬಹಿರಂಗವಾಗಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವಿಧಾನ ಪರಿಷತ್ತಿನಲ್ಲಿ ಮಂಡಿಸಿದ ಮಾಹಿತಿಯ ಪ್ರಕಾರ 2018-19 ಮತ್ತು 2022-23ರ ನಡುವೆ 57,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿದ್ದಾರೆ. ಈ ರೀತಿ ಶಾಲೆಯಿಂದ ಹೊರಗುಳಿಯಲು ವಲಸೆ, ಕೌಟುಂಬಿಕ ಕಲಹಗಳು, ಆರೋಗ್ಯ ಸಮಸ್ಯೆಗಳು, ದೈಹಿಕ ಅಂಗವೈಕಲ್ಯ ಹೀಗೆ ಅನೇಕ ಕಾರಣದಿಂದ ಹೊರಗುಳಿದಿದ್ದಾರೆ.

ಇನ್ನು ಬುಡಕಟ್ಟು ಕುಟುಂಬಗಳ ಮಕ್ಕಳು, ಅನಾಥರು, ಅಲೆಮಾರಿಗಳು, ಬೀದಿ ಮಕ್ಕಳು ಅಥವಾ ಚಿಂದಿ ಆಯುವವರ ಮಕ್ಕಳು ಸಹ ಶಾಲೆಯಿಂದ ಹೊರಗುಳಿಯುವ ಸಾಧ್ಯತೆಯಿದೆ” ಎಂದು ಮಧು ಬಂಗಾರಪ್ಪ ಹೇಳಿದರು.

ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ.ಪಿ ಮಾತನಾಡಿ, ರಾಜ್ಯದಲ್ಲಿ ಶಿಕ್ಷಣ ಹಕ್ಕು ಕಾಯ್ದೆ ಜಾರಿಯಲ್ಲಿ ಹಲವಾರು ಲೋಪದೋಷಗಳಿವೆ. ಕರ್ನಾಟಕ ಹೈಕೋರ್ಟ್ನಲ್ಲಿ ರಿಟ್ ಮ್ಯಾಂಡಮಸ್ ನೀಡಿರುವುದರಿಂದ, ಸರಿಯಾದ ಅಂಕಿಅಂಶಗಳನ್ನು ನೀಡಲು ಸರ್ಕಾರವು ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ