ಬೆಂಗಳೂರು : ಕೊರೊನಾ 3ನೆಯ ಅಲೆ ಬೀಸುತ್ತಿದ್ದಂತೆ ಎಚ್ಚೆತ್ತಿರುವ ಕರ್ನಾಟಕ ರಾಜ್ಯ ಸರ್ಕಾರ ರಾಜ್ಯಾದ್ಯಂತ ಶಾಲೆಗಳ ಆರಂಭಕ್ಕೆ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ.
ಪ್ರತಿದಿನ ಬೆಳಗಿನ ಅವಧಿಯಲ್ಲಿ ಭೌತಿಕ ತರಗತಿಗೆ ಅವಕಾಶ ನೀಡಲಾಗಿದೆ. ಶಾಲೆಗೆ ಬರುವುದಕ್ಕೆ ಪೋಷಕರ ಅನುಮತಿ ಪತ್ರ ತರಬೇಕು. ಶಾಲೆಯಲ್ಲಿ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ವಿದ್ಯಾರ್ಥಿಗಳಿಗೆ ಭೌತಿಕ ಹಾಜರಾತಿ ಕಡ್ಡಾಯವಿರುವುದಿಲ್ಲ.
ಮಗುವಿಗೆ ಕೊರೊನಾ ಲಕ್ಷಣದ ಕುರಿತು ದೃಢಪಡಿಸಬೇಕು. ಪೋಷಕರು ಲಕ್ಷಣ ಇಲ್ಲದಿರುವ ಕುರಿತು ದೃಢಪಡಿಸಬೇಕು ಎಂಬ ಮಾರ್ಗಸೂಚಿಗಳು ಅನಾವರಣಗೊಂಡಿವೆ.