ಮೀಸಲಾತಿ ಅಳಿವು-ಉಳಿವು- ಇಂದು ಸುಪ್ರೀಂನಲ್ಲಿ ನಿರ್ಧಾರ

ಸೋಮವಾರ, 7 ನವೆಂಬರ್ 2022 (09:07 IST)
ನವದೆಹಲಿ : ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗದಲ್ಲಿ ಆರ್ಥಿಕವಾಗಿ ಹಿಂದುಳಿದ ಮೇಲರ್ಗದ ಬಡ ಅಭ್ಯರ್ಥಿಗಳಿಗೆ ಶೇ.10ರಷ್ಟು ಮೀಸಲಾತಿ ನೀಡಲು,

ಕೇಂದ್ರ ಸರ್ಕಾರ ಸಂವಿಧಾನಕ್ಕೆ ತಂದಿದ್ದ 103ನೇ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಲಾಗಿರುವ ಹಲವು ಅರ್ಜಿಗಳ ವಿಚಾರಣೆ ಕುರಿತಂತೆ ಸುಪ್ರೀಂಕೋರ್ಟ್ ಸೋಮವಾರ ಮಹತ್ವದ ತೀರ್ಪು ಪ್ರಕಟಿಸಲಿದೆ.

ಹೀಗಾಗಿ `ಮೇಲ್ವರ್ಗದ ಮೀಸಲು’ ಎಂದೇ ಕರೆಯಲ್ಪಡುವ ಈ ಮೀಸಲಾತಿ ಮುಂದುವರಿಯುತ್ತದೆಯೇ? ಅಥವಾ ರದ್ದಾಗುತ್ತದೆಯೇ? ಅಥವಾ ಬದಲಾವಣೆಯಾಗುತ್ತದೆಯೇ ಎಂಬ ಕುತೂಹಲ ಗರಿಗೆದರಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ