ಫ್ಲೈಓವರ್ ; ಭಾರೀ ವಾಹನಗಳ ಓಡಾಟಕ್ಕೆ ನಿರ್ಬಂಧ !

ಭಾನುವಾರ, 15 ಜನವರಿ 2023 (12:21 IST)
ಬೆಂಗಳೂರು : ತುಮಕೂರು ರಾಷ್ಟ್ರೀಯ ಹೆದ್ದಾರಿಯ ವಾಹನ ಸವಾರರಿಗೆ ಇದು ಕಹಿ ಸುದ್ದಿ. ಪೀಣ್ಯ ಫ್ಲೈಓವರ್ ಮೇಲೆ ಮತ್ತೆ ಘನ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ.

ಕಳೆದ ವರ್ಷ ಪೀಣ್ಯ ಫ್ಲೈಓವರ್ನ ಎರಡು ಪಿಲ್ಲರ್ನ ಕೇಬಲ್ಗಳಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದ ಕಾರಣ ಎರಡ್ಮೂರು ತಿಂಗಳುಗಳ ಕಾಲ ಹೆವಿ ವೆಹಿಕಲ್ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಪಿಲ್ಲರ್ಗಳಿಗೆ ಕೇಬಲ್ ಅಳವಡಿಸಿದ ಬಳಿಕ ಭಾರತೀಯ ವಿಜ್ಞಾನ ಸಂಸ್ಥೆ ಭಾರಿ ವಾಹನಗಳ ಓಡಾಡಿಸಿ ತಪಾಸಣೆ ಮಾಡಿ ಸಂಚಾರಕ್ಕೆ ಗ್ರಿನ್ ಸಿಗ್ನಲ್ ನೀಡಿತ್ತು.

ಆದರೆ ಈಗ ಮತ್ತೆ ಹೆವಿ ವೆಹಿಕಲ್ ಓಡಾಟಕ್ಕೆ ನಿರ್ಬಂಧಿಸಲಾಗಿದೆ. ಕಾರಣ ಫ್ಲೈಓವರ್ನ ಎಲ್ಲಾ ಪಿಲ್ಲರ್ಗಳಲ್ಲಿ ಕೇಬಲ್ ಕಿತ್ತು ಬರುವ ಆತಂಕ ಇದೆಯಂತೆ. ಹಾಗಾಗಿ ಕೇಬಲ್ ಕಿತ್ತು ಬರುವುದಕ್ಕೂ ಮುಂಚೆಯೇ ಹೊಸ ಕೇಬಲ್ಗಳನ್ನು ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧಾರಿಸಿದೆ. 

ಇದಕ್ಕಾಗಿ ಟೆಂಡರ್ ಕೂಡ ನೀಡಿದ್ದು ಫೆಬ್ರವರಿ ತಿಂಗಳಲ್ಲಿ ಕೆಲಸ ಶುರುವಾಗುವ ಸಾಧ್ಯತೆ ಇದೆ. ಹಾಗಾಗಿ ಹೆವಿ ವೆಹಿಕಲ್ ಓಡಾಟ ನಡೆಸಿದರೆ ಪಿಲ್ಲರ್ ಮತ್ತು ಫ್ಲೈಓವರ್ ಕೇಬಲ್ಗಳು ಕಿತ್ತು ಬರುವ ಸಾಧ್ಯತೆ ಇರೋದ್ರಿಂದ ಮುಂದಿನ ನಾಲ್ಕು ತಿಂಗಳವರೆಗೂ ಹೆವಿ ವೆಹಿಕಲ್ಗಳಿಗೆ ನಿರ್ಬಂಧಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ