ನವಭಾರತದ ಉದಯ : ಇಸ್ರೋದ ಚಂದ್ರಯಾನ-3 ಯಶಸ್ಸಿಗೆ ಪ್ರಧಾನಿ ಶುಭಾಶಯ

ಗುರುವಾರ, 24 ಆಗಸ್ಟ್ 2023 (10:50 IST)
ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಮಹತ್ವದ ಚಂದ್ರಯಾನ-3 ಸಕ್ಸಸ್ ಆಗಿದೆ. ಚಂದ್ರನ ದಕ್ಷಿಣ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಕಾಲಿಟ್ಟಿದೆ. ಇಸ್ರೋದ ಐತಿಹಾಸಿದ ಸಾಧನೆಗೆ ಪ್ರಧಾನಿ ಮೋದಿ ಅವರು ದಕ್ಷಿಣ ಆಫ್ರಿಕಾದಿಂದಲೇ ಶುಭಾಶಯ ತಿಳಿಸಿದರು.

ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಆಗುತ್ತಿದ್ದಂತೆಯೇ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಪ್ರಧಾನಿ ಮೋದಿ ಸಂಭ್ರಮ ಹಂಚಿಕೊಂಡರು.

ಈ ವೇಳೆ ಮಾತನಾಡಿದ ಪ್ರಧಾನಿ, ನಾನು ದಕ್ಷಿಣ ಆಫ್ರಿಕಾದಲ್ಲಿದ್ದೇನೆ. ಆದರೆ ನನ್ನ ಮನಸ್ಸು ಚಂದ್ರಯಾನ ಮೇಲಿತ್ತು. ಚಂದ್ರಯಾನ ಯಶಸ್ವಿ ಜನರಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದೆ. ನಾನು ನಮ್ಮ ಜನರ ಖುಷಿಯ ಸಮಯದಲ್ಲಿ ಭಾಗಿಯಾಗಿದ್ದೇನೆ. ನಾನು ಇಸ್ರೋ ಮತ್ತು ದೇಶದ ವಿಜ್ಞಾನಿಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ