ಆರ್ ಆರ್ ನಗರದ ಕಿಂಗ್ ಯಾರು? ಇಂದು ಬರಲಿದೆ ಚುನಾವಣೆ ರಿಸಲ್ಟ್
ನಕಲಿ ವೋಟರ್ ಐಡಿ ಪ್ರಕರಣದಿಂದಾಗಿ ಈ ಕ್ಷೇತ್ರದ ಚುನಾವಣೆ ಮುಂದೂಡಲಾಗಿತ್ತು. ಸೋಮವಾರ ನಡೆದ ಚುನಾವಣೆಯಲ್ಲಿ ಶೇ. 53 ರಷ್ಟು ಮತದಾನವಾಗಿತ್ತು.
ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚಿಸಿದರೂ ಈ ಕ್ಷೇತ್ರದಲ್ಲಿ ಬೇರೆ ಬೇರೆಯಾಗಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರು. ಅತ್ತ ಬಿಜೆಪಿಯಿಂದ ಯುವ ನಾಯಕ ತುಳಸಿ ಮುನಿರಾಜು ಕಣಕ್ಕಿಳಿದಿದ್ದರು. ತನ್ನ ಅಭ್ಯರ್ಥಿ ಗೆದ್ದು ಸಮ್ಮಿಶ್ರ ಸರ್ಕಾರಕ್ಕೆ ಮುಖಭಂಗ ಮಾಡುವ ತವಕದಲ್ಲಿ ಬಿಜೆಪಿಯಿದೆ. ಇನ್ನು ಸಮ್ಮಿಶ್ರ ಸರ್ಕಾರದ ಪಾಲುದಾರರಾಗಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ತಮ್ಮ ಅಭ್ಯರ್ಥಿ ಗೆದ್ದು, ತಮ್ಮ ತಮ್ಮ ಪಕ್ಷದ ವರ್ಚಸ್ಸು ಹೆಚ್ಚಿಸಿಕೊಳ್ಳುವ ಉತ್ಸಾಹದಲ್ಲಿವೆ. ಯಾರ ಕೈ ಮೇಲಾಗಲಿದೆ ಎಂಬುದು ಸದ್ಯದಲ್ಲೇ ತಿಳಿದುಬರಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.