ಶಬರಿಮಲೆ ಯಾತ್ರೆ ಮುಂದೂಡಿಕೆ!

ಭಾನುವಾರ, 17 ಅಕ್ಟೋಬರ್ 2021 (15:48 IST)
ಕೊಚ್ಚಿ (ಅ 17) :  ದಕ್ಷಿಣ ಮತ್ತು ಮಧ್ಯ ಕೇರಳದಲ್ಲಿ ಭಾರೀ ಮಳೆಯಿಂದಾಗಿ ಶನಿವಾರ 6 ಜನ ಸಾವನ್ನಪ್ಪಿದ್ದಾರೆ ಮತ್ತು 12ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಮಳೆಯಿಂದಾಗಿ ಹಲವು ಭಾಗಗಳಲ್ಲಿ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು, ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿದೆ. ಈ ನಡುವೆ ಅಧಿಕ ಮಳೆಯಿಂದಾಗಿ ಕೇರಳ ದಕ್ಷಿಣ ಭಾಗದ ಎಲ್ಲಾ ಅಣೆಕಟ್ಟುಗಳು ತುಂಬಿದ್ದು, ಹೆಚ್ಚುವರಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ಪರಿಣಾಮ ಗುಡ್ಡಗಾಡು ಪ್ರದೇಶಗಳು, ಹಳ್ಳಿ-ಗ್ರಾಮ ಮತ್ತು ಸಣ್ಣ ಪಟ್ಟಣಗಳು ದ್ವೀಪದಂತಾಗಿವೆ. ಅನೇಕ ಗ್ರಾಮಗಳು ಹೊರಗಿನ ಪ್ರಪಂಚದಿಂದ ಸಂಪೂರ್ಣ ಸಂಪರ್ಕ ಕಡಿತಗೊಂಡಿವೆ. ಈ ನಡುವೆ ಕೇರಳ ಸರ್ಕಾರ ಅಯ್ಯಪ್ಪ ಸ್ವಾಮಿಯ ಶಬರಿಮಲೆ ಯಾತ್ರೆಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ರದ್ದು ಮಾಡಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ