ಕೇರಳದಲ್ಲಿ ಶಬರಿಮಲೆ ಪ್ರತಿಭಟನೆ ತೀವ್ರ

ಮಂಗಳವಾರ, 9 ಅಕ್ಟೋಬರ್ 2018 (08:33 IST)
ತಿರುವನಂತಪುರಂ: ಶಬರಿಮಲೆ ದೇವಾಲಯಕ್ಕೆ ಮಹಿಳೆಯರಿಗೂ ಪ್ರವೇಶ ಅವಕಾಶ ನೀಡಬೇಕೆಂದು ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಕೇರಳದಲ್ಲಿ ಪ್ರತಿಭಟನೆ ಹೆಚ್ಚಾಗುತ್ತಿದೆ.

ಶಬರಿಮಲೆ ಅಯ್ಯಪ್ಪ ಸ್ವಾಮಿಯ ಮನೆತನವಾದ ಪಂತಳ ರಾಜಮನೆತನ ಮತ್ತು ಪುರೋಹಿತರ ವರ್ಗ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿದ್ದು, ಹಲವು ವರ್ಷಗಳಿಂದ ನಡೆದುಬಂದ ಸಂಪ್ರದಾಯವನ್ನು ಮುರಿಯುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಈ ವರ್ಗ ಇದೀಗ ಸುಪ್ರೀಂಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಮುಂದಾಗಿದೆ. ಈ ನಡುವೆ ಇಕ್ಕಟ್ಟಿಗೆ ಸಿಲುಕಿರುವ ಕೇರಳ ಸರ್ಕಾರ ತಂತ್ರಿಗಳು ಮತ್ತು ಪಂತಳ ರಾಜಮನೆತನದವರ ಜತೆ ಮಾತುಕತೆಗೆ ಮುಂದಾಗಿದೆ. ಇದು ದೇವಾಲಯದ ಸಂಪ್ರದಾಯಕ್ಕೆ ವಿರೋಧ. ಸರ್ಕಾರ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ