ಭಾರೀ ಮಳೆಯಿಂದ ಶಾಲೆಗಳು ಬಂದ್!
ಗುರುಗ್ರಾಮದಲ್ಲಿರುವ ಖಾಸಗಿ ಕಂಪನಿಗಳು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಿವೆ.
ಉತ್ತರಪ್ರದೇಶದ ಕೆಲ ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಶಾಲೆ ಮುಚ್ಚಲಾಗಿದೆ. ಸಿಡಿಲು ಬಡಿದು ಗೋಡೆ ಕುಸಿದ ಘಟನೆಯಲ್ಲಿ 13 ಜನ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ.
ದೆಹಲಿಯಲ್ಲೂ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿವೆ. ಪ್ರಮುಖ ರಸ್ತೆಗಳಲ್ಲಿ ಸಂಚಾರದಟ್ಟಣೆ ಹೆಚ್ಚಾಗಿದ್ದು, ಟ್ರಾಫಿಕ್ ಸಮಸ್ಯೆ ನಿಯಂತ್ರಿಸುವಂತೆ ಸಹಾಯವಾಣಿಗೆ ಕರೆಗಳು ಬರಲಾರಂಭಿಸಿವೆ. ರಕ್ಷಣಾತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದು, ಅಲ್ಲಲ್ಲಿ ಬಿದ್ದ ಮರಗಳನ್ನು ತೆರವುಗೊಳಿಸಲಾಗುತ್ತಿವೆ.