ವಿದ್ಯುತ್ ಉತ್ಪಾದನೆ ತೀವ್ರ ಕುಸಿತ?

ಶುಕ್ರವಾರ, 22 ಏಪ್ರಿಲ್ 2022 (11:43 IST)
ತೀವ್ರ ಕಲ್ಲಿದ್ದಲಿನ ಕೊರತೆಯಿಂದಾಗಿ ಶನಿವಾರ ಹಾಗೂ ಭಾನುವಾರ ಆರು ಶಾಖೋತ್ಪನ್ನ ವಿದ್ಯುತ್ ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿತ್ತು.
 
ಪರಿಣಾಮ ವಿದ್ಯುತ್ ಪೂರೈಕೆಯಲ್ಲಿ ಸಾಕಷ್ಟುವ್ಯತ್ಯಯವಾಗಿದ್ದು, ರಾಜ್ಯಾದ್ಯಂತ ಕಳೆದ ಎರಡು ದಿನಗಳಿಂದ ತೀವ್ರ ವಿದ್ಯುತ್ ಕಡಿತ ಮಾಡಲಾಗುತ್ತಿದೆ.

ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಲ್ಲಿನ ಉತ್ಪಾದನೆ 6220 ಮೆ.ವ್ಯಾ.ನಿಂದ 1915 ಮೆ.ವ್ಯಾಗೆ ಕುಸಿದಿದೆ. ಇದೇ ವೇಳೆ, ಬೇಸಿಗೆ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದ್ದರೂ, ಒಟ್ಟಾರೆ ಎಲ್ಲ ಮೂಲಗಳಿಂದ ಪೂರೈಕೆ ಆಗುತ್ತಿದ್ದ ವಿದ್ಯುತ್ ನಿತ್ಯದ ಸರಾಸರಿ 14,000 ಮೆ.ವ್ಯಾಟ್ನಿಂದ 11,550 ಮೆ.ವ್ಯಾಟ್ಗೆ (ಗರಿಷ್ಠ) ಶನಿವಾರ ಕುಸಿದಿದೆ.

ಭಾನುವಾರ ಈ ಪ್ರಮಾಣ ಮತ್ತಷ್ಟುಕಡಿಮೆಯಾಗಿ 9,918 ಮೆ.ವ್ಯಾಟ್ಗೆ (ಗರಿಷ್ಠ) ಕುಸಿದಿದೆ. ಪರಿಣಾಮ, ಮಳೆಯ ನೆಪದಲ್ಲಿ ರಾಜ್ಯಾದ್ಯಂತ ತೀವ್ರ ವಿದ್ಯುತ್ ಕಡಿತ ಆರಂಭವಾಗಿದೆ ಎನ್ನಲಾಗಿದೆ.

ಆರ್ಟಿಪಿಎಸ್ನ ಎಂಟು ಘಟಕಗಳಿಗೆ 1,720 ಮೆ.ವ್ಯಾಟ್ ಉತ್ಪಾದನೆ ಸಾಮರ್ಥ್ಯವಿದೆ. ಮೊದಲೇ 5 ಘಟಕಗಳಿಂದ ಮಾತ್ರ ವಿದ್ಯುತ್ ಉತ್ಪಾದನೆಯಾಗುತ್ತಿದ್ದ ಕೇಂದ್ರದಲ್ಲಿ ಶನಿವಾರ ಹಾಗೂ ಭಾನುವಾರ 2, 6 ಮತ್ತು 7ನೇ ಘಟಕವನ್ನು ಕಲ್ಲಿದ್ದಲು ಕೊರತೆಯಿಂದ ಸ್ಥಗಿತಗೊಳಿಸಲಾಗಿತ್ತು. ಪರಿಣಾಮ ಭಾನುವಾರ 454 ಮೆ.ವ್ಯಾಟ್ (ಗರಿಷ್ಠ ಲೋಡ್) ವಿದ್ಯುತ್ ಉತ್ಪಾದನೆಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ