ಮಂಗಳೂರು: ಜೂನ್ 23 ರಂದು ಸಿರಿಯಾ ದೇಶದ ಎಂಬಿ ಪ್ರಿನ್ಸೆಸ್ ಮಿರಲ್ ವ್ಯಾಪಾರಿ ಹಡಗು ಅರಬ್ಬೀ ಸಮುದ್ರದಲ್ಲಿ ಮುಳುಗಡೆಯಾಗಿತ್ತು.
ಇದೀಗ ವಿದೇಶಿ ಸರಕು ಸಾಗಾಣೆ ಹಡಗಿನಲ್ಲಿ ಬರೋಬ್ಬರಿ 220 ಮೆಟ್ರಿಕ್ ಟನ್ ತೈಲ ಸೋರಿಕೆಯಾಗಿರುವ ಬಗ್ಗೆ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಜೂನ್ 23 ರಂದು ಮಂಗಳೂರಿನ ಉಚ್ಚಿಲ ಬಟ್ಟಪಾಡಿ ಕಡಲ ತೀರದಲ್ಲಿ ಸಿರಿಯಾ ದೇಶದ ಎಂಬಿ ಪ್ರಿನ್ಸೆಸ್ ಮಿರಲ್ ವ್ಯಾಪಾರಿ ಹಡಗು ಮುಳುಗಡೆಯಾಗಿತ್ತು. ಅದು ಚೀನಾದಿಂದ ಲೆಬನಾನ್ಗೆ 8 ಸಾವಿರ ಟನ್ ಸ್ಟೀಲ್ ಕಾಯಿಲ್ ಸಾಗಿಸುತ್ತಿತ್ತು.
ಹಡಗು ಮುಳುಗಡೆ ವೇಳೆ ಇಂಡಿಯನ್ ಕೋಸ್ಟ್ ಗಾರ್ಡ್ ಅದರಲ್ಲಿದ್ದ 15 ಸಿಬ್ಬಂದಿಯ ರಕ್ಷಣೆ ಮಾಡಿತ್ತು. ಆದರೆ ಇದೀಗ ತೈಲ ಸೋರಿಕೆ ಬಗ್ಗೆ ಆತಂಕ ಸೃಷ್ಟಿಯಾಗಿದೆ.