ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್!

ಶನಿವಾರ, 11 ಡಿಸೆಂಬರ್ 2021 (07:27 IST)
ಬೆಂಗಳೂರು : ಬೇಸಿಗೆಗೂ ಮುನ್ನವೇ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಬಿಸಿ ಎದುರಾಗಿದ್ದು, ವಿದ್ಯುತ್ ದರ ಹೆಚ್ಚಳಕ್ಕೆ ವಿದ್ಯುತ್ ಸರಬರಾಜು ಕಂಪನಿಗಳು ಪ್ರಸ್ತಾವನೆ ಸಲ್ಲಿಸಿದೆ.

ಪ್ರತಿ ಯೂನಿಟ್ ಗೆ 1.50 ಪೈಸೆ ಹೆಚ್ಚಳ ಮಾಡುವಂತೆ ವಿದ್ಯುತ್ ಸರಬರಾಜು ಕಂಪನಿಗಳಿಂದ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಪ್ರತಿ ಯುನಿಟ್ ಗೆ 1 ರೂ. 50 ಪೈಸೆ ಹೆಚ್ಚಳ ಮಾಡುವಂತೆ ಕೆಇಆರ್ ಸಿಗೆ ಕಂಪನಿಗಳು ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ.

ನಷ್ಟದ ನೆಪ ಹೇಳಿ ವಿದ್ಯುತ್ ದರ ಪ್ರತಿ ಯುನಿಟ್ ಗೆ 1.50 ರೂ. ಹೆಚ್ಚಳ ಮಾಡುವಂತೆ ಕೆಇಆರ್ ಸಿ ಗೆ ಕಂಪನಿಗಳು ಪ್ರಸ್ತಾವನೆ ಸಲ್ಲಿಸಿವೆ. 

ಈಗಾಗಲೇ ಪೆಟ್ರೋಲ್, ಡೀಸೆಲ್, ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಬೆಸ್ಕಾಂ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು, ಶೀಘ್ರವೇ ವಿದ್ಯುತ್ ದರವೂ ಹೆಚ್ಚಳವಾಗುವ ಸಾಧ್ಯತೆ ಇದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ