ಬೆಂಗಳೂರು ಜನತೆಗೆ ಶಾಕ್!

ಗುರುವಾರ, 3 ಫೆಬ್ರವರಿ 2022 (08:23 IST)
ಬೆಂಗಳೂರು : ರಾಜಧಾನಿಗೆ ಬಿಬಿಎಂಪಿ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು, ವಿದ್ಯುತ್ ಬಿಲ್ ಮೂಲಕ ಕಸ ನಿರ್ವಹಣೆ ಸೆಸ್ ಸಂಗ್ರಹಕ್ಕೆ ಬಿಬಿಎಂಪಿ ಪ್ಲಾನ್ ಮಾಡ್ತಿದೆ.

ಬಿಬಿಎಂಪಿ ಸೆಸ್ ಸಂಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿದೆ. ಸರ್ಕಾರ ಒಪ್ಪಿಗೆ ಸೂಚಿಸಿದ್ರೇ ಸದ್ಯದಲ್ಲೇ ಸಿಲಿಕಾನ್ ಸಿಟಿ ಜನರ ಮನೆಗೆ ತಿಂಗಳಿಗೊಮ್ಮೆ ಕರೆಂಟ್ ಬಿಲ್ ಜೊತೆಗೆ ಗಾರ್ಬೇಜ್ ಬಿಲ್ ಬರಲಿದೆ.

2011 ರಿಂದ ಆಸ್ತಿ ತೆರಿಗೆ ಮೇಲೆ ಶೇ.19 ರಷ್ಟು ಸೆಸ್ ಸಂಗ್ರಹಿಸಲಾಗುತ್ತಿದೆ. ಆದರೆ ಇದರಿಂದ ಕಸ ನಿರ್ವಹಣಾ ವೆಚ್ಚದ ಶೇ.15 ರಷ್ಟು ಸಂಗ್ರಹಣೆಯಾಗುತ್ತಿಲ್ಲ.

ಈ ಹಿನ್ನೆಲೆಯಲ್ಲಿ ವಿದ್ಯುತ್ ಬಿಲ್ ಮೂಲಕ ಪ್ರತಿ ತಿಂಗಳು ಕಸ ನಿರ್ವಹಣೆ ಸೆಸ್ ಸಂಗ್ರಹಿಸಲು ಬಿಬಿಎಂಪಿ ಮುಂದಾಗಿದೆ. ಇದರಿಂದ ಮಾಸಿಕ 48 ಕೋಟಿ ರೂ. ಆದಾಯದ ನಿರೀಕ್ಷೆಯಲ್ಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ