ರಾಜ್ಯದಲ್ಲಿ ಇಂದು ತುಂತುರು ಮಳೆ

ಭಾನುವಾರ, 21 ನವೆಂಬರ್ 2021 (11:27 IST)
ಬೆಂಗಳೂರಿನಲ್ಲಿ  ಕನಿಷ್ಠ 19, ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಇದೇ ರೀತಿ ಬುಧವಾರದವರೆಗೂ ಹವಾಮಾನ ಮುಂದುವರಿಯಲಿದೆ.
ಗುರುವಾರ ಮತ್ತು ಶುಕ್ರವಾರ ಬೆಂಗಳೂರಿನಲ್ಲಿ ಒಣ ಹವೆ ಇರಲಿದೆ. ಮತ್ತೆ ಶನಿವಾರ ಮಳೆ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮಳೆ ಸುರಿಯಲಿದೆ. ಕೆಲವು ಕಡೆ ಗುಡುಗು-ಸಿಡಿಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರಿನ ಕೆಲವು ಭಾಗಗಳಲ್ಲಿ ಕೊಂಚ ಮಳೆಯ ಪ್ರಮಾಣ ಕೊಂಚ ಇಳಿಮುಖವಾಗುವ ಸಾಧ್ಯತೆಗಳಿವೆ. ಇತ್ತ ರಾಜ್ಯದ ಬಹುತೇಕ ಕೆರೆಗಳು  ಭರ್ತಿಯಾಗಿ ಕೋಡಿ ಬಿದ್ದು, ನೀರು ಹರಿಯುತ್ತಿದೆ.  ಇತ್ತ ನಿರಂತರ ಮಳೆ ಹಿನ್ನೆಲೆ ಕೃಷಿ ಭೂಮಿಯಲ್ಲಿ ನೀರು ಶೇಖರಣೆಯಾಗುತ್ತಿರುವ ಕಾರಣ ರೈತರು  ಸಂಕಷ್ಟದಲ್ಲಿ ಸಿಲುಕಿದ್ದಾರೆ.
ಜಲಾಯಶಕ್ಕೆ ಒಳ ಹರಿವು ಹೆಚ್ಚಳವಾದ ಹಿನ್ನಲೆ ತುಂಗಭದ್ರಾ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಹಾಗಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಮಾಹಿತಿ ನೀಡಿದ್ದಾರೆ. ಇತ್ತ ನಿರಂತರ ಮಳೆಯಿಂದಾಗಿ  ರಾಜ್ಯದ ಜಲಾಶಯಗಳು ಭರ್ತಿಯಾಗುತ್ತಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕ ಸಂದೇಶ ನೀಡಲಾಗಿದೆ. ಮುಂದಿನ ಎರಡು ದಿನ ಮೀನುಗಾರಿಕೆ ನಿಷೇಧಿಸಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ