ಖಾತೆ ಕ್ಯಾತೆ ಬಿಡಿಸಲು ದೆಹಲಿಯಲ್ಲೇ ಬೀಡುಬಿಟ್ಟ ಸಿದ್ದರಾಮಯ್ಯ

ಭಾನುವಾರ, 27 ಮೇ 2018 (12:18 IST)
ನವದೆಹಲಿ: ರಾಜ್ಯದ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ನಿನ್ನೆಯೇ ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಇನ್ನೂ ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ.

ಹೈಕಮಾಂಡ್ ಜತೆ ಖಾತೆ ಹಂಚಿಕೆ ಕುರಿತಂತೆ ಚರ್ಚಿಸಲು ನಿನ್ನೆಯೇ ರಾಜ್ಯ ಕಾಂಗ್ರೆಸ್ ನಾಯಕರ ನಿಯೋಗ ದೆಹಲಿಗೆ ತೆರಳಿತ್ತು. ಆದರೆ ನಿನ್ನೆ ನಡೆದ ಸಭೆಯಲ್ಲಿ ಯಾವುದೂ ಅಂತಿಮವಾಗಿಲ್ಲ.

ಇಂದೂ ಕೂಡಾ ದೆಹಲಿಯಲ್ಲೇ ಇರುವ ಸಿದ್ದರಾಮಯ್ಯ ಕರ್ನಾಟಕ ಭವನದಲ್ಲಿ ಇಂದು ಸಚಿವ ಸ್ಥಾನದ ಆಕಾಂಕ್ಷಿಗಳ ಅಹವಾಲು ಸ್ವೀಕರಿಸುತ್ತಿದ್ದಾರೆ. ಆದರೆ ಸಚಿವ ಸ್ಥಾನಕ್ಕಾಗಿ ಯಾವುದೇ ಬಿಕ್ಕಟ್ಟು ತಲೆದೋರಿಲ್ಲ. ಸಿಎಂ ಕುಮಾರಸ್ವಾಮಿ ಜತೆ ಚರ್ಚಿಸಿ ಪಟ್ಟಿ ಅಂತಿಮಗೊಳಿಸುವುದಾಗಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ