‘ಹೌದು ನಾನೇ ಟ್ರಬಲ್ ಶೂಟರ್’ ಎಂದ ಸಿದ್ದರಾಮಯ್ಯ
ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ‘ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಸಮಸ್ಯೆ ಬರದಂತೆ ನನ್ನನ್ನು ಸಮನ್ವಯ ಸಮಿತಿ ಅಧ್ಯಕ್ಷನನ್ನಾಗಿ ನೇಮಿಸಲಾಗಿದೆ. ಸರ್ಕಾರಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ನನ್ನ ಕೆಲಸ. ಈ ಸರ್ಕಾರವನ್ನು ಅಸ್ಥಿರಗೊಳಿಸಲು ಯಾವೊಬ್ಬ ಶಾಸಕರೂ ಪ್ರಯತ್ನಿಸಲ್ಲ’ ಎಂದಿದ್ದಾರೆ.
ಅಷ್ಟೇ ಅಲ್ಲದೆ, ‘ಈ ಸಮ್ಮಿಶ್ರ ಸರ್ಕಾರದ ಬಗ್ಗೆ ಜನರಲ್ಲಿ ಒಳ್ಳೆ ಅಭಿಪ್ರಾಯವಿದೆ. ಈ ಸರ್ಕಾರ ಐದು ವರ್ಷ ಪೂರೈಸಿಯೇ ಪೂರೈಸುತ್ತದೆ. ಅದರಲ್ಲಿ ಯಾವುದೇ ಸಂಶಯವೂ ಇಲ್ಲ. ಏನೇ ಭಿನ್ನಾಭಿಪ್ರಾಯಗಳು ಬಂದರೂ ನನ್ನ ನೇತೃತ್ವದಲ್ಲೇ ಬಗೆಹರಿಯಲಿದೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.