ಬಿಎಸ್ ಯಡಿಯೂರಪ್ಪ ಟ್ವೀಟ್ ಗೆ ಸಿದ್ದರಾಮಯ್ಯ ಎದಿರೇಟು
ನಿನ್ನೆ ಮಹಾರಾಷ್ಟ್ರದಲ್ಲಿ ಸೇವಾ ಗ್ರಾಮದಲ್ಲಿ ನಡೆಯುತ್ತಿರುವ ಎಐಸಿಸಿ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡ ಸಿದ್ದರಾಮಯ್ಯ ಟ್ವಿಟರ್ ಮೂಲಕ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಮ್ಮ ದೇಶದ ರಾಜಧಾನಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕುವುದನ್ನು ನೋಡಿದರೆ 2008 ರಲ್ಲಿ ಬಿಜೆಪಿ ಸರ್ಕಾರ ರೈತರ ಮೇಲೆ ಗೋಲಿಬಾರ್ ನಡೆಸಿದ ಘಟನೆ ನೆನಪಾಗುತ್ತದೆ. ರಾಫೆಲ್ ಹಗರಣ ಮತ್ತು ರೈತರ ಮೇಲೆ ಬಿಜೆಪಿಯ ಧೋರಣೆ ನೋಡಿದರೆ ಇವರದ್ದು ಪಕ್ಕಾ ರೈತ ವಿರೋಧಿ ಮತ್ತು ಸೈನಿಕ ವಿರೋಧಿ ಧೋರಣೆ ಎಂಬುದು ಸ್ಪಷ್ಟವಾಗುತ್ತದೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.