ತಮ್ಮ ಬಗ್ಗೆ ಬಂದ ವದಂತಿಗಳಿಗೆ ತೆರೆ ಎಳೆದ ಸಿದ್ದರಾಮಯ್ಯ
ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ. ಈ ಬಗ್ಗೆ ಮಾಧ್ಯಮಗಳಲ್ಲಿ ಬರುವ ವರದಿಗಳನ್ನು ನಂಬಬೇಡಿ. ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಯಾವುದೇ ಗೊಂದಲಗಳಿಲ್ಲ. ಮಾಧ್ಯಮಗಳು ಸೃಷ್ಟಿಸುವ ಬಿರುಕಿನ ಬಗ್ಗೆ ಯಾರೂ ಗಮನ ಕೊಡಬೇಡಿ ಎಂದು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಸಿಎಂ ಕುಮಾರಸ್ವಾಮಿ ದೆಹಲಿಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ವೇಳೆ ಸಿದ್ದರಾಮಯ್ಯ ವಿರುದ್ಧ ದೂರಿದ್ದರು ಎಂಬ ವರದಿಗಳಾಗಿತ್ತು. ಅದರ ಬೆನ್ನಲ್ಲೇ ಸಿದ್ದರಾಮಯ್ಯ ಇಂತಹದ್ದೊಂದು ಟ್ವೀಟ್ ಮಾಡಿ ವಿವಾದ ತಣ್ಣಗಾಗಿಸುವ ಯತ್ನ ಮಾಡಿದ್ದಾರೆ.