ಬೆಂಗಳೂರು : ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ನಿಧಾನವಾಗಿ ಏರಿಕೆಯಾಗುತ್ತಿದೆ. ಸೋಂಕಿನ ಜೊತೆಗೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ.
ಸೋಮವಾರ ಒಂದೇ ದಿನ 308 ಮಂದಿಗೆ ಕೊರೋನಾ ಬಂದಿದೆ. ಈ ವರ್ಷ ಬೆಂಗಳೂರಿನಲ್ಲಿ ದಾಖಲಾದ ಎರಡನೇ ಅತಿಹೆಚ್ಚಿನ ಪಾಸಿಟಿವ್ ಸಂಖ್ಯೆ ಇದಾಗಿದೆ.
ಏ.13 ರಂದು 328 ಮಂದಿಯಲ್ಲಿ ಕೊರೊನಾ ದೃಢಪಟ್ಟಿತ್ತು. ಪಾಸಿಟಿವಿಟಿ ದರ ಶೇ.5.88 ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದ 40 ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.