ನವದೆಹಲಿ : ಪ್ರಯಾಣ, ಪ್ರವಾಸೋದ್ಯಮ ಹಾಗೂ ಆತಿಥ್ಯ ವ್ಯವಹಾರಗಳ ಮೇಲೆ ಕೋವಿಡ್-19 ಪ್ರಭಾವವನ್ನು ಅನುಸರಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉದ್ಯಮ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಬ್ಯಾಂಕಿಂಗ್ ಸಂಬಂಧಿತ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ಕೋವಿಡ್-19 ಹಾವಳಿಯಿಂದ ಅನೇಕ ಆತಿಥ್ಯ ಕ್ಷೇತ್ರಗಳಿಗೆ ಭಾರೀ ಹೊಡೆತ ಉಂಟಾಗಿದೆ.
ಕೇಂದ್ರ ಬಜೆಟ್ 2022-23ರಲ್ಲಿ ಹಣಕಾಸು ಸಚಿವೆ ಆತಿಥ್ಯ ಕ್ಷೇತ್ರಕ್ಕೆ ಸಾಕಷ್ಟು ಬೆಂಬಲವನ್ನು ನೀಡಿದ್ದಾರೆ. ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್(ಇಸಿಎಲ್ಜಿ ಎಸ್) ಅಡಿಯಲ್ಲಿ ಹೆಚ್ಚುವರಿ 50 ಸಾವಿರ ರೂ. ವಿಂಡೋವನ್ನು ತೆರೆಯುವ ಯೋಜನೆಯನ್ನು ಘೋಷಿಸಲಾಗಿದೆ. ಇದನ್ನೂ ಓದಿ: ನಾವು ಮಾತುಕತೆಗೆ ಸಿದ್ಧರಿದ್ದೇವೆ ಎಂದ ರಷ್ಯಾ!
ಸಭೆಯಲ್ಲಿ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕರದ್, ಹಣಕಾಸು ಕಾರ್ಯದರ್ಶಿ ಟಿ.ವಿ ಸೋಮನಾಥನ್, ಹಣಕಾಸು ಸೇವೆ, ಆರ್ಥಿಕ ವ್ಯವಹಾರ ಹಾಗೂ ಕಂದಾಯ ಕಾರ್ಯದರ್ಶಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.