ಪರಸ್ಪರ ಒಪ್ಪಿಗೆ ಇದ್ದಲ್ಲಿ ವಿಚ್ಛೇದನಕ್ಕೆ ಆರು ತಿಂಗಳ ಅಗತ್ಯವಿಲ್ಲ : ಸುಪ್ರೀಂ ಕೋರ್ಟ್

ಗುರುವಾರ, 4 ಮೇ 2023 (06:47 IST)
ನವದೆಹಲಿ : ಪರಸ್ಪರ ಒಪ್ಪಿಗೆಯ ಮೂಲಕ ವಿಚ್ಛೇದನಕ್ಕಾಗಿ ಆರು ತಿಂಗಳ ಕಡ್ಡಾಯವಾಗಿ ಕಾಯುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
 
ಪತಿ ಹಾಗೂ ಪತ್ನಿಯ ಒಪ್ಪಿಗೆ ಇದ್ದಾಗ ಕೌಟುಂಬಿಕ ನ್ಯಾಯಾಲಯವನ್ನು ಒಪ್ಪಿಸದೇ ಮದುವೆಯನ್ನು ರದ್ದು ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಆದೇಶ ಪ್ರಕಟಿಸಿದೆ. 

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಎಎಸ್ ಓಕಾ, ವಿಕ್ರಮ್ ನಾಥ್ ಮತ್ತು ಜೆಕೆ ಮಹೇಶ್ವರಿ ಅವರನ್ನು ಒಳಗೊಂಡ ಸಂವಿಧಾನಿಕ ಪೀಠ ಸಂವಿಧಾನದ 142ನೇ ವಿಧಿಯನ್ನು ಬಳಸಿಕೊಂಡು ಈ ತೀರ್ಪು ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ