ಇಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಸೋಮವಾರ, 8 ಮೇ 2023 (07:12 IST)
ಬೆಂಗಳೂರು : ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮಹತ್ವದ ಸುದ್ದಿಗೋಷ್ಟಿ ಕರೆದಿದೆ.
 
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪ್ರಸಕ್ತ ಸಾಲಿನ ಫಲಿತಾಂಶ ಬಿಡುಗಡೆ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ರಾಜ್ಯದ 8 ಲಕ್ಷ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಬಿಡುಗಡೆ ಆಗಲಿದೆ. ಬೆಳಗ್ಗೆ 11 ಗಂಟೆಗೆ ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್  ಞಚಿಡಿಡಿesuಟಣs.ಟಿiಛಿ.iಟಿ  ನಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯಾದ್ಯಂತ ಒಟ್ಟು 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಬಂದ ಉತ್ತರ ಪತ್ರಿಕೆಗಳನ್ನು ತಿದ್ದಲು 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ