ಜೂನ್ 12ರಿಂದ ಜೂನ್ 19ರವರೆಗೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ

ಗುರುವಾರ, 8 ಜೂನ್ 2023 (06:52 IST)
ಮೇ 22 ರಂದು ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬಿಡುಗಡೆ ಮಾಡಿದ್ದು, ಜೂನ್ 12ರಿಂದ ಜೂನ್ 19ರವರೆಗೆ ಪರೀಕ್ಷೆಗಳು ನಡೆಯಲಿವೆ.

2022-23ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಮೇ 8ರಂದು ಪ್ರಕಟಗೊಂಡಿತ್ತು. ಈ ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಮೇ 15ರ ವರೆಗೆ ಅವಕಾಶ ನೀಡಲಾಗಿತ್ತು.

ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಬಳಿ ಇರುವುದು ಕೇವಲ 5 ದಿನಗಳಷ್ಟೆ, 6ನೇ ದಿನದಿಂದ ಪರೀಕ್ಷೆ ಬರೆಯಬೇಕಿದೆ. ಹೀಗಾಗಿ ಪರೀಕ್ಷೆಗೆ ಇನ್ನೂ ಹೆಚ್ಚಿನ ತಯಾರಿ ನಡೆಸಿ. ಆ ಮೂಲಕ ಪರೀಕ್ಷೆಯ ಕುರಿತ ಭಯ, ಆತಂಕ, ಗೊಂದಲ ಇತ್ಯಾದಿಗಳನ್ನು ದೂರಮಾಡಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವಲ್ಲಿ ಯಶಸ್ವಿಯಾಗಿರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ