ಬೆಂಗಳೂರು : ನಗರದಲ್ಲಿ ಕಳೆದ ನಾಲ್ಕು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.
ಹೀಗಾಗಿ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕೊವಿಡ್ ರೂಲ್ಸ್ ಜಾರಿಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಶೀಘ್ರದಲ್ಲೇ ಬಿಬಿಎಂಪಿಯಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಲಿದೆ. ಕಳೆದ ವಾರ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸರ್ಕಾರ ಒಪ್ಪಿದೆ.
ಸಭೆ ಸಮಾರಂಭಗಳಿಗೆ ಜನರ ಮಿತಿ ನಿಗದಿ ಮಾಡುವುದು ಮತ್ತು 2 ಡೋಸ್ ಲಸಿಕೆ ಕಡ್ಡಾಯ ಮಾಡಲು ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು.
ಸದ್ಯ ಕೊರೊನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮತ್ತೆ ಪ್ರಸ್ತಾವನೆ ಸಲ್ಲಿಸಲಿದೆ. ಪ್ರಸ್ತಾವನೆಯಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲು ಮನವಿ ಮಾಡಬಹುದು. ಮಾಲ್, ಚಿತ್ರಮಂದಿರ, ಕಲ್ಯಾಣ ಮಂಟಪ, ರೆಸ್ಟೋರೆಂಟ್, ಹೋಟೆಲ್ಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಪ್ರವೇಶ ನೀಡುವಂತೆ ಬಿಬಿಎಂಪಿ ತನ್ನ ಪ್ರಸ್ತಾವನೆಯಲ್ಲಿ ತಿಳಿಸುವ ಸಾಧ್ಯತೆ ಹೆಚ್ಚಿದೆ.