ಬೆಂಗಳೂರಿನ ಹಲವೆಡೆ ದಿಢೀರ್ ಭಾರೀ ಮಳೆ

ಗುರುವಾರ, 14 ಸೆಪ್ಟಂಬರ್ 2023 (07:25 IST)
ಬೆಂಗಳೂರು : ಕಳೆದ ಕೆಲ ದಿನಗಳಿಂದ ಬಿಡುವು ಪಡೆದಿದ್ದ ವರುಣ ಇಂದು ಸಿಲಿಕಾನ್ ಸಿಟಿಗೆ ಮತ್ತೆ ತಂಪೆರಿದಿದ್ದಾನೆ.

ಹೌದು. ನಗರದ ಹಲವೆಡೆ ಇಂದು ಸಂಜೆಯ ವೇಳೆಗೆ ಮಳೆಯಾಗಿದೆ. ರಾಜಾಜಿನಗರ, ಮೆಜೆಸ್ಟಿಕ್, ಮಲ್ಲೇಶ್ವರಂ, ಶಿವಾನಂದ ಸರ್ಕಲ್, ಯಶವಂತಪುರ, ರಾಜಾಜಿನಗರ, ಎಂ.ಜಿ ರಸ್ತೆ, ಕಬ್ಬನ್ ಪಾರ್ಕ್, ಕೋರಮಂಗಲ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗುತ್ತಿದೆ.

ದಿಢೀರ್ ಸುರಿದ ಮಳೆಯಿಂದಾಗಿ ಕೆಲಸ ಮುಗಿಸಿ ವಾಪಸ್ಸಾಗುತ್ತಿರುವ ಮಂದಿಗೆ ಕಿರಿಕಿರಿ ಉಂಟಾಯಿತು. ನಗರದ ಪ್ರಮುಖ ರಸ್ತೆಗಳ ಮೇಲೆ ನೀರು ನಿಂತಿದ್ದು ವಾಹನ ಸವಾರರು ಪರದಾಟ ಅನುಭವಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ