ಪಾಕಿಸ್ತಾನದಲ್ಲಿ ಸಕ್ಕರೆ ದರ ಕೇಳಿದ್ರೆ ಶಾಕ್ ಆಗ್ತೀರಾ!

ಶುಕ್ರವಾರ, 5 ನವೆಂಬರ್ 2021 (15:46 IST)
ಪಾಕಿಸ್ತಾನವು ಸಕ್ಕರೆ ಸಂಕಷ್ಟದಲ್ಲಿ ಸಿಲುಕಿದೆ. ಒಂದು ಕೆಜಿ ಸಕ್ಕರೆ ಬೆಲೆ ಬರೋಬ್ಬರಿ 145 ರೂ. ತಲುಪಿದೆ.
ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಳ್ಳುವಲ್ಲಿ ಪಾಕಿಸ್ತಾನ ಪ್ರಮುಖ ಸ್ಥಾನ ವಹಿಸಿತ್ತು. ತಾಲಿಬಾನಿಗಳು ಪಾಕಿಸ್ತಾನವು ನಮ್ಮ ಎರಡನೇ ಮನೆ ಎಂದು ಕರೆದಿದ್ದರು. ಈಗ ಆ ದೇಶಕ್ಕೆ ಅಂತಾರಾಷ್ಟ್ರೀಯ ಮಾನ್ಯತೆಯನ್ನು ಕೊಡಿಸಲು ಇನ್ನಿಲ್ಲದ ತಂತ್ರಗಳನ್ನು ಅನುಸರಿಸುತ್ತಿದೆ. ಈ ಬೆನ್ನಲ್ಲೇ ಪಾಕಿಸ್ತಾನಕ್ಕೆ ಸಂಕಷ್ಟವೊಂದು ಎದುರಾಗಿದೆ. ಇದೀಗ ಸಕ್ಕರೆ ಬೆಲೆ ತೀವ್ರ ಹೆಚ್ಚಳವಾಗಿರುವುದು ಜನರನ್ನು ಸಂಕಷ್ಟಕ್ಕೆ ತಳ್ಳಿದೆ. ಈಗ ಅಲ್ಲಿ ಒಂದು ಕೆ.ಜಿ ಸಕ್ಕರೆಗೆ ಹೋಲ್ಸೇಲ್ ಬೆಲೆ 140ರೂಪಾಯಿ ಇದ್ದರೆ, ರಿಟೇಲ್ ಬೆಲೆ 145 ರೂಪಾಯಿ ಇದೆ ಎಂದು ಅಲ್ಲಿನ ARY News ವರದಿ ಮಾಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ