ಮುಸ್ಲಿಮರ ಪ್ರಾರ್ಥನೆಗೆ ಮಸೀದಿ ಬೇಕೆ? ಸುಪ್ರೀಂ ಕೋರ್ಟ್ ನಲ್ಲಿ ಇಂದು ಮಹತ್ವದ ತೀರ್ಪು
ಮುಸ್ಲಿಮರ ಪ್ರಾರ್ಥನೆಗೆ ಮಸೀದಿಯ ಅಗತ್ಯವಿಲ್ಲ. ಅವರು ಎಲ್ಲಿ ಬೇಕಾದರೂ ನಮಾಜ್ ಮಾಡಿಕೊಳ್ಳಬಹುದು. ಅಗತ್ಯ ಬಂದಾಗ ಸರ್ಕಾರ ಮಸೀದಿಗಳನ್ನು ವಶಪಡಿಸಿಕೊಳ್ಳಬಹುದು ಎಂಬ 1994 ರ ತೀರ್ಪಿನ ವಿರುದ್ಧ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಲಿದೆ.
ಇದು ಬಾಬ್ರಿ ಮಸೀದಿ, ರಾಮಜನ್ಮಭೂಮಿ ಪ್ರಕರಣಕ್ಕೆ ಸಂಬಂಧವಿರುವ ಕಾರಣ ಈ ತೀರ್ಪು ಅತ್ಯಂತ ಮಹತ್ವದ್ದಾಗಲಿದೆ. ಈ ತೀರ್ಪು ರಾಮಜನ್ಮಭೂಮಿ ವಿವಾದದ ಪ್ರಕರಣದ ತೀರ್ಪಿನ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಇಂದು ಮಧ್ಯಾಹ್ನ ಸುಪ್ರೀಂ ಕೋರ್ಟ್ ನೀಡಲಿರುವ ತೀರ್ಪಿನ ಬಗ್ಗೆ ಮುಸ್ಲಿಮ್ ಸಮುದಾಯ ಕುತೂಹಲದಿಂದ ಎದುರು ನೋಡುತ್ತಿದೆ.