ತೂಗು ಸೇತುವೆ ಕುಸಿತ! ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

ಸೋಮವಾರ, 31 ಅಕ್ಟೋಬರ್ 2022 (07:44 IST)
ಗಾಂಧೀನಗರ :  ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಕುಸಿತದ ವೇಳೆ ಸೇತುವೆ ಮೇಲೆ 500ಕ್ಕೂ ಹೆಚ್ಚು ಮಂದಿ ಇದ್ದರು. ಕುಸಿತದಿಂದಾಗಿ ಇನ್ನೂ 100ಕ್ಕೂ ಹೆಚ್ಚು ಮಂದಿ ನೀರುಪಾಲಾಗಿದ್ದಾರೆ.
 
ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ಘೋಷಿಸಲಾಗಿದೆ.

ಮೃತರ ಕುಟುಂಬಕ್ಕೆ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರವನ್ನು ರಾಜ್ಯ ಸರ್ಕಾರ ನೀಡಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ