ಚೆನೈ : ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ತಮಿಳುನಾಡು ತತ್ತರಿಸಿ ಹೋಗಿದೆ. ಭಾರಿ ಮಳೆಗೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ತಿರುವಳ್ಳೂರ್, ಚೆಂಗಲ್ಪಟ್ಟು, ಕಾಂಚಿಪುರ ಸೇರಿ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಧಾರಾಕಾರ ಮಳೆಗೆ ಚೆನ್ನೈ ಮಹಾನಗರ ಸ್ತಬ್ಧವಾಗಿದೆ. ಚೆನ್ನೈ ಏರ್ಪೋರ್ಟ್ ರನ್ವೇ ಕೂಡ ಬಂದ್ ಆಗಿದ್ದು, ಚೆನ್ನೈ ಲೋಕಲ್ ಟ್ರೈನ್ಗಳು ಸ್ತಬ್ಧಗೊಂಡಿವೆ.
ತಮಿಳುನಾಡಿನಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಮಳೆ ಹಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ನಿಂದ ಮಾಹಿತಿ ಪಡೆದು, ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.