ಅಕಾಲಿಕ ಮಳೆಗೆ ತಮಿಳುನಾಡು ತತ್ತರ!

ಶುಕ್ರವಾರ, 31 ಡಿಸೆಂಬರ್ 2021 (06:12 IST)
ತಮಿಳುನಾಡು : ನೆರೆಯ ರಾಜ್ಯಗಳಾದ ತಮಿಳುನಾಡಿನಲ್ಲಿ ಅಕಾಲಿಕವಾಗಿ ಭಾರೀ ಮಳೆಯಾಗುತ್ತಿದೆ.
 
ಮಳೆಯ ಅಬ್ಬರಕ್ಕೆ ಚೆನ್ನೈನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಡಿಸೆಂಬರ್‌ನ ಬಹುಪಾಲು ಅವಧಿಯಲ್ಲಿ ತಮಿಳುನಾಡು ಕಡು ಬಿಸಿಲಿತ್ತು. ಆದರೆ, ಇಂದಿನಿಂದ ಭಾರೀ ಮಳೆ ಶುರುವಾಗಿದ್ದು, ಇನ್ನೊಂದು ವಾರ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ.

 
ಕಡಲತೀರದ ಮಾರುತಗಳು ತಮಿಳುನಾಡಿನ ಕರಾವಳಿಯ ಮೇಲೆ ದಾಳಿ ಮಾಡಲು ಸಿದ್ಧವಾಗಿವೆ. ಇದರಿಂದ ತಮಿಳುನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇಂದು ಮತ್ತು ಜನವರಿ 1ರಂದು ತಮಿಳುನಾಡಿನಲ್ಲಿ ಮಳೆ ಹೆಚ್ಚಾಗಲಿದೆ.

ಭಾರತೀಯ ಹವಾಮಾನ ಇಲಾಖೆ  ಜನವರಿ 1 ರವರೆಗೆ ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ದಕ್ಷಿಣ ಆಂಧ್ರಪ್ರದೇಶದಾದ್ಯಂತ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಇಂದು (ಶುಕ್ರವಾರ) ಕರಾವಳಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಶನಿವಾರದಂದು ಆಂಧ್ರಪ್ರದೇಶದ ದಕ್ಷಿಣ ಕರಾವಳಿಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಹೀಗಾಗಿ, ಮುಂದಿನ ಎರಡು ದಿನಗಳ ಕಾಲ ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಪುದುಚೇರಿಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಶುಕ್ರವಾರ ಮತ್ತು ಶನಿವಾರದಂದು ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ಕಾರೈಕಾಲ್ ಮತ್ತು ಪುದುಚೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ