ದೆಹಲಿಯಲ್ಲಿ ತಾಪಮಾನ ಏರಿಕೆ ..!

ಶುಕ್ರವಾರ, 16 ಜೂನ್ 2023 (07:33 IST)
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತಾಪಮಾನ ಹೆಚ್ಚುತ್ತಿದ್ದು ಜನರು ಮನೆಯಿಂದ ಹೊರ ಬರಲು ಹೆದರುವ ಸನ್ನಿವೇಶ ನಿರ್ಮಾಣವಾಗಿದೆ. ಕಳೆದ ಒಂದು ವಾರದಿಂದ ತೀವ್ರ ಬಿಸಿಲಿಸಿದ್ದು, ಗಂಟೆಗೆ 30-40 ಕಿಮೀ ವೇಗದಲ್ಲಿ ಬಿಸಿ ಗಾಳಿ ಬೀಸಲಿದೆ.
 
ಮಂಗಳವಾರ 43 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದ್ದು, ಬುಧವಾರ ಇದು 41 ಡಿಗ್ರಿ ಸೆಲ್ಸಿಯಸ್ಗೆ ಇಳಿದಿದೆ. ಬಿಪರ್ ಜಾಯ್ ಚಂಡಮಾರುತ (ಇಂದು ಗುಜರಾತ್ನ ಕಛ್ ಮತ್ತು ಸೌರಾಷ್ಟ್ರ ಭಾಗದಲ್ಲಿ ಅಪ್ಪಳಿಸುತ್ತಿರುವ ಹಿನ್ನಲೆ ಬಿಸಿ ಗಾಳಿಯ ಪ್ರಮಾಣ ತಗ್ಗಲಿದ್ದು ಮುಂದಿನ 4 ದಿನಗಳ 37ಲಿ-39ಲಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. 

ಸದ್ಯ ತೀವ್ರ ಬಿಸಿಲಿರುವ ಹಿನ್ನಲೆಯಲ್ಲಿ ಜನರು ಮನೆಯಿಂದ ಹೊರ ಬರಲು ಹಿಂದೇಟು ಹಾಕ್ತಿದ್ದಾರೆ. ಮಧ್ಯಾಹ್ನದ ವೇಳೆ ಜನರ ಸಂಚಾರ ವಿರಳವಾಗಿದೆ. ಉರಿ ಬಿಸಿಲಿನಿಂದ ಜನರಲ್ಲಿ ಸುಸ್ತು ಕಾಣಿಸಿಕೊಳ್ಳುತ್ತಿದ್ದು ಬೆವರಿನಿಂದ ತುರಿಕೆ ಸಮಸ್ಯೆಯೂ ಕಂಡು ಬರುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ