ವಸ್ತ್ರ ಸಂಹಿತೆ ಕಡ್ಡಾಯ!

ಭಾನುವಾರ, 27 ಫೆಬ್ರವರಿ 2022 (07:30 IST)
ಪರೀಕ್ಷೆ ಬರೆಯಲಿರುವ ಪುರುಷ ಅಭ್ಯರ್ಥಿಗಳಿಗೆ ಕೋವಿಡ್ ಮಾರ್ಗದರ್ಶಿ ಸೂತ್ರಗಳ ಹಿನ್ನೆಲೆಯಲ್ಲಿ ಅರೆಪಾರದರ್ಶಕ,
 
ಸರ್ಜಿಕಲ್ ಮಾಸ್ಕ್(ಎನ್-95 ಮತ್ತು ಇತರ ಬಗೆಯ ಮಾಸ್ಕ್ ನಿಷಿದ್ಧ) ಅರೆದೋಳಿನ ಅಂಗಿ ಮತ್ತು ಸಾದಾ ಪ್ಯಾಂಟ್ ಹಾಗೂ ಚಪ್ಪಲಿಗಳನ್ನು ಕಡ್ಡಾಯಗೊಳಿಸಲಾಗಿದೆ.

ಹಾಗೆಯೇ, ಮಹಿಳಾ ಅಭ್ಯರ್ಥಿಗಳಿಗೆ ಸರ್ಜಿಕಲ್ ಮಾಸ್ಕ್, ಅರೆದೋಳಿನ ಉಡುಪುಗಳನ್ನು ಸೂಚಿಸಲಾಗಿದೆ. ಪುರುಷರಾಗಲಿ, ಮಹಿಳೆಯರಾಗಲಿ ತುಂಬುದೋಳಿನ ಉಡುಪು, ಶೂ, ಆಭರಣ(ಪದಕ, ಮೂಗುಬೊಟ್ಟು, ಕಿವಿಯೋಲೆ, ನೆಕ್ಲೇಸ್, ಬ್ರೇಸ್ಲೆಟ್) ಮತ್ತು ಅಲಂಕಾರಿಕ ಉಡುಪುಗಳನ್ನು ಧರಿಸಿಕೊಂಡು ಬರುವುದನ್ನು ನಿಷೇಧಿಸಲಾಗಿದೆ.

ಅಭ್ಯರ್ಥಿಗಳಿಗೆ ಯಾವುದೇ ಬ್ರ್ಯಾಂಡ್ ನ ಹೆಸರಿಲ್ಲದ ಸಾದಾ ಬಾಟಲಿಯಲ್ಲಿ ಕುಡಿಯುವ ನೀರನ್ನು ಪರೀಕ್ಷಾ ಕೊಠಡಿಗೆ ತೆಗೆದುಕೊಂಡು ಬರಲು ಅವಕಾಶ ಕೊಡಲಾಗಿದೆ ಎಂದು ಪ್ರಾಧಿಕಾರವು ಮಾಹಿತಿ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ