ಜಾಮೀನು ಕೋರಿ ದುನಿಯಾ ವಿಜಯ್ ಸಲ್ಲಿಸಿದ ಅರ್ಜಿ ವಜಾ ಗೊಳಿಸಿದ ಕೋರ್ಟ್

ಗುರುವಾರ, 27 ಸೆಪ್ಟಂಬರ್ 2018 (08:41 IST)
ಬೆಂಗಳೂರು : ಜಿಮ್ ಟ್ರೈನರ್ ಮಾರುತಿ ಗೌಡ ಅವರ ಮೇಲಿನ ಹಲ್ಲೆ ಮತ್ತು ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದುನಿಯಾ ವಿಜಯ್ ಮತ್ತು ಸ್ನೇಹಿತರು ಸಲ್ಲಿಸಿದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.


ಜಿಮ್ ಟ್ರೈನರ್ ಮಾರುತಿ ಗೌಡ ಅವರನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ಮಾಡಿದ್ದಕ್ಕೆ ನಟ ದುನಿಯಾ ವಿಜಯ್ ಮತ್ತು ಸ್ನೇಹಿತರಿಗೆ ಕೋರ್ಟ್ 14 ದಿನಗಳವರೆಗೂ ನ್ಯಾಯಾಂಗ ಬಂಧನದಲ್ಲೇ ಇರಬೇಕೆಂದು ಆದೇಶಿಸಿದೆ.


ಆದಕಾರಣ ನಟ ದುನಿಯಾ ವಿಜಯ್ ಮತ್ತು ಸ್ನೇಹಿತರು ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸೋಮವಾರ ಜಾಮೀನು ಅರ್ಜಿ ವಿಚಾರಣೆ ಮಾಡಿದ್ದ 8ನೇ ಎಸಿಎಂಎಂ ಕೊರ್ಟ್ ಇಂದು ವಿಜಯ್ ಮತ್ತು ಅವರ ಸಹಚರರ ಜಾಮೀನು ತಿರಸ್ಕರಿಸಿ ತೀರ್ಪು ನೀಡಿದೆ. ಮೇಲಿನ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವುದಾಗಿ ವಿಜಯ್ ಪರ ವಕೀಲರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ