ಇಂದು ಸರ್ವಪಕ್ಷ ಸಭೆ ಕರೆದ ಸರ್ಕಾರ

ಬುಧವಾರ, 13 ಸೆಪ್ಟಂಬರ್ 2023 (08:04 IST)
ಬೆಂಗಳೂರು : ತಮಿಳುನಾಡಿಗೆ ಮತ್ತೆ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ಸೂಚಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ.
 
ಈ ಹಿನ್ನೆಲೆಯಲ್ಲಿ ಮುಂದಿನ ತೀರ್ಮಾನ ಕೈಗೊಳ್ಳುವ ಸಲುವಾಗಿ ರಾಜ್ಯ ಸರ್ಕಾರ ಇಂದು ವಿಶೇಷ ಸರ್ವಪಕ್ಷ ಸಭೆ ಕರೆದಿದೆ.ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮಧ್ಯಾಹ್ನ 12:30ಕ್ಕೆ ವಿಶೇಷ ಸರ್ವಪಕ್ಷ ಸಭೆ ನಡೆಯಲಿದೆ.

ವಿಪಕ್ಷಗಳ ಸದನ ನಾಯಕರು, ಕಾವೇರಿ ಜಲಾನಯನ ಕ್ಷೇತ್ರಗಳ ಸಂಸದರು, ಶಾಸಕರು, ಪರಿಷತ್ ಸದಸ್ಯರು, ಮಾಜಿ ಸಿಎಂಗಳಿಗೆ ಸಭೆಗೆ ಬರುವಂತೆ ಆಹ್ವಾನಿಸಲಾಗಿದೆ. ಸೇರಿ ತೀರ್ಮಾನ ಮಾಡಲಿದ್ದಾರೆ. ಜತೆಗೆ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕೊಂಡೊಯ್ಯುವ ಬಗ್ಗೆ ಮುಹೂರ್ತ ನಿಗದಿ ಮಾಡುವ ಸಾಧ್ಯತೆ ಇದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ