ಪಿಎಫ್ಐ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಕರ್ನಾಟಕದ ಪಿಎಫ್ಐ ಅಧ್ಯಕ್ಷ ನಾಸಿರ್ ಅಲಿ ನಿಷೇಧವನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಸರ್ಕಾರ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿದೆ. ಕಾನೂನುಬಾಹಿರ ಸಂಘಟನೆ ಎನ್ನಲು ಕಾರಣ ನೀಡಿಲ್ಲ.
ತಕ್ಷಣ ನಿಷೇಧಕ್ಕೆ ಕಾರಣ ನೀಡಬೇಕಿತ್ತು. ವಾದಮಂಡನೆಗೆ ಕಾಲಾವಕಾಶ ನೀಡದೇ ಬ್ಯಾನ್ ಮಾಡಲಾಗಿದೆ. ಯುಎಪಿಎ ಕಾಯ್ದೆಗೆ ವಿರುದ್ಧವಾಗಿ ಆದೇಶ ಹೊರಡಿಸಲಾಗಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್ ಪಾಟೀಲ್ ವಾದ ಮಂಡಿಸಿದ್ದರು.
ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದಾರೆ.