ಬೆಂಗಳೂರು : ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಅರ್ಜಿಸಲ್ಲಿಸಲಾಗಿದೆ.
ಈ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನ್ಯಾಯಪೀಠವು ನಿರಾಕರಿಸಿದೆ. ಈ ಮೂಲಕ ಹಿಜಾಬ್ ಪರ ವಕೀಲರಿಗೆ ಹಿನ್ನಡೆಯಾದಂತಾಗಿದೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ಅಲ್ಲಿ ಇತ್ಯಾರ್ಥವಾಗುವವರೆಗೆ ವಿಚಾರಣೆ ತೆಗೆದುಕೊಳ್ಳಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿದೆ.