18 ತಿಂಗಳಲ್ಲಿ ಅತೀ ಕಡಿಮೆ ಕೋವಿಡ್ ಸೋಂಕು

ಸೋಮವಾರ, 18 ಅಕ್ಟೋಬರ್ 2021 (17:19 IST)
ಬೆಂಗಳೂರು : ಪ್ರಸಕ್ತ ವರ್ಷದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಕೋವಿಡ್ ಸೋಂಕು ಹೊಸ ಪ್ರಕರಣಗಳು 100ಕ್ಕಿಂತ ಕಡಿಮೆ ವರದಿಯಾಗಿವೆ. ಅಲ್ಲದೆ, 18 ತಿಂಗಳ ಅನಂತರ ಇದೇ ಮೊದಲ ಬಾರಿ ಹೊಸ ಪ್ರಕರಣಗಳು 200 ಆಸುಪಾಸಿಗೆ ಇಳಿಕೆಯಾಗಿವೆ.

ಸೋಮವಾರ 214 ಮಂದಿಗೆ ಸೋಂಕು ದೃಢಪಟ್ಟಿದ್ದು, 12 ಮಂದಿ ಮೃತಪಟ್ಟಿದ್ದಾರೆ. 488 ಮಂದಿ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇ. 0.3ರಷ್ಟಿದೆ.
ಎಲ್ಲಿ ಎಷ್ಟು ಮಂದಿಗೆ ಸೋಂಕು:
ಅತಿ ಹೆಚ್ಚು ಬೆಂಗಳೂರು 83 ಪ್ರಕರಣ ವರದಿಯಾಗಿದೆ. ದಕ್ಷಿಣ ಕನ್ನಡ 22, ಮೈಸೂರು 27, ತುಮಕೂರು 14, ಶಿವಮೊಗ್ಗ ಮತ್ತು ಹಾಸನ ತಲಾ 13 ಮಂದಿಗೆ ಸೋಂಕು ತಗುಲಿದ್ದು, ಉಳಿದಂತೆ 13 ಜಿಲ್ಲೆಗಳಲ್ಲಿ ಬೆರಳೆಣಿಕೆ, 12 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣಗಳು ದಾಖಲಾಗಿದೆ. ಹೊಸ ಪ್ರಕರಣಗಳು ಪತ್ತೆಯಾಗಿಲ್ಲ. ಇನ್ನು 12 ಸಾವಿನ ಪೈಕಿ ಬೆಂಗಳೂರು ನಗರದಲ್ಲಿ 4, ಮೈಸೂರು 2, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಮಂಡ್ಯ, ತುಮಕೂರು ಹಾಗೂ ಉಡುಪಿಯಲ್ಲಿ ತಲಾ ಒಂದು ಸಾವು ವರದಿಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ