ಮಸೀದಿ ಆಯ್ತು ಈಗ ಈದ್ಗಾ ಮೈದಾನ – ಏನಿದು ವಿವಾದ?

ಸೋಮವಾರ, 6 ಜೂನ್ 2022 (01:28 IST)
ಬೆಂಗಳೂರು : ರಾಜ್ಯದಲ್ಲಿ ಮಸೀದಿ, ದರ್ಗಾ-ದೇಗುಲ ದಂಗಲ್ ಬಳಿಕ ಮೈದಾನದ ಸರದಿ ಪ್ರಾರಂಭವಾಗಿದೆ. ಇದೀಗ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನ ಮತ್ತೆ ವಿವಾದದ ಕೇಂದ್ರ ಬಿಂದುವಾಗಿದೆ.
 
ಚಾಮರಾಜಪೇಟೆಯ ಆಟದ ಮೈದಾನವನ್ನೇ ಆಗಿನಿಂದ ಈದ್ಗಾ ಮೈದಾನ ಎಂದು ಕರೆಯುತ್ತಾರೆ. 1952ರಿಂದ ಈ ಮೈದಾನದ ವಿಚಾರವಾಗಿ ವಿವಾದ ಪ್ರಾರಂಭವಾಗಿದ್ದು, ಇದೀಗ ಮತ್ತೇ ಮುನ್ನೆಲೆಗೆ ಬಂದಿದೆ.
ಹಿಂದೂ ಧಾರ್ಮಿಕ ಆಚರಣೆಗಳಿಗೆ ಅವಕಾಶ ಕೊಡದಿದ್ದರೆ, ಈದ್ಗಾ ಮೈದಾನವನ್ನು ನೆಲಸಮ ಮಾಡುತ್ತೇವೆ ಎಂದು ವಿಶ್ವ ಸನಾತನ ಪರಿಷತ್ ಸಂಘದ ಅಧ್ಯಕ್ಷ ಎಸ್. ಭಾಸ್ಕರನ್ ಎಚ್ಚರಿಸಿದ್ದಾರೆ. ಕೋರ್ಟ್ ಆದೇಶವಿದ್ದರೂ ಧಾರ್ಮಿಕ ಆಚರಣೆಗೆ ಪೊಲೀಸರು ಅವಕಾಶ ಕೊಡುತ್ತಿಲ್ಲ.
ಮುಸ್ಲಿಂ ಸಮುದಾಯದವರು ಹಿಂದೂಗಳ ಧಾರ್ಮಿಕ ಆಚರಣೆಗೆ ವಿರೋಧಿಸುತ್ತಿಲ್ಲ. ಆದರೆ, ಕ್ಷೇತ್ರದ ಶಾಸಕರು ಪೊಲೀಸರ ಮೂಲಕ ಅಡ್ಡಿ ಪಡಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಜಮೀರ್ ವಿರುದ್ಧ ಕಿಡಿಕಾರಿದ್ದಾರೆ.
ಕೋರ್ಟ್‍ನಿಂದ ಆದೇಶ ಬಂದರೂ, ಈ ಜಾಗದಲ್ಲಿ ರಾಷ್ಟ್ರಧ್ವಜವನ್ನಾಗಲಿ, ನಾಡಧ್ವಜವನ್ನಾಗಿ ಹಾರಿಸಲು ಪೊಲೀಸರು ಬಿಟ್ಟಿಲ್ಲ. ಮುಸ್ಲಿಂ ಸಮುದಾಯಕ್ಕೆ ಹಾಗೂ ಈ ಮೈದಾನಕ್ಕೆ ಯಾವುದೇ ಸಂಬಂಧವಿಲ್ಲ ಎಂದು ನ್ಯಾಯಲಯ ಹೇಳಿದರೂ, ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಪಾಲಿಕೆಯ ಕಂದಾಯ ಅಧಿಕಾರಿಗಳನ್ನು ಹೆದರಿಸಿ, ಈದ್ಗಾ ಮೈದಾನವನ್ನು ಖಾತೆ ಮಾಡಿಸಿದ್ದಾರೆ ಅಂತ ಹಿಂದೂ ಸಂಘಟನೆಯ ಕೆಲವರು ಆರೋಪಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ