ಬೆಂಗಳೂರು : ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಕೊರೋನಾ ಜೊತೆಗೆ ಒಮಿಕ್ರಾನ್ ಕೂಡ ಹೆಚ್ಚಾಗುತ್ತಿದ್ದು,
1 ರಿಂದ 9ನೆ ತರಗತಿ ಮಕ್ಕಳಿಗೆ ಶಾಲೆಗಳು ಬಂದ್ ಆಗುತ್ತಿದ್ದು ಆನ್ಲೈನ್ ಕ್ಲಾಸ್ ಮಾಡಲಾಗುತ್ತದೆ. ರಾಜ್ಯದಲ್ಲಿ ಒಮಿಕ್ರಾನ್ ಹೆಚ್ಚಳವಾಗಿದ್ದು ಈ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುತ್ತದೆ. ಇನ್ನು ಇಂದಿನಿಂದ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗುತ್ತಿದೆ.
ಇನ್ನು ದೇಶದಲ್ಲಿ ದಿನದಿನವೂ ಕೇಸ್ಗಳು ಹೆಚ್ಚಾಗುತ್ತಿದ್ದು ಮುಂದಿನ ಎರಡು ವಾರಗಳು ಭಾರತಕ್ಕೆ ನಿರ್ಣಾಯಕ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.